ಕನ್ಹಯ್ಯ ಕುಮಾರ್ – ಎಸ್ ಎ ಆರ್ ಗಿಲಾನಿ
ನವದೆಹಲಿ: ಜೆಎನ್ ಯು ವಿದ್ಯಾರ್ಥಿ ಸಂಘಟನೆ ಮುಖಂಡ ಕನ್ಹಯ್ಯ ಕುಮಾರ್, ದಿಲ್ಲಿ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಪಕ ಪ್ರೊ.ಎಸ್.ಎ.ಆರ್. ಗಿಲಾನಿ ವಿರುದ್ಧ ನ್ಯಾಯಾಂಗ ನಿಂದನೆಯ ಆರೋಪ ಹೊರಿಸಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಫೆ.22 ರಂದು ಕೈಗೆತ್ತಿಕೊಳ್ಳಲಿದೆ.
ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಟಿಎಸ್ ಠಾಕೂರ್,
ನ್ಯಾ. ಆರ್ ಭಾನುಮತಿ ಹಾಗೂ ಯುಯು ಲಲಿತ್ ಅರ್ಜಿ ವಿಚಾರಣೆ ನಡೆಸಲು ಒಪ್ಪಿಗೆ ಸೂಚಿಸಿದ್ದಾರೆ. ಉಗ್ರ ಅಫ್ಜಲ್ ಗುರುಗೆ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದ್ದನ್ನು ವಿರೋಧಿಸಿರುವ ಪ್ರೊ.ಎಸ್.ಎ.ಆರ್. ಗಿಲಾನಿ, ಕನ್ಹಯ್ಯ ಕುಮಾರ್ ಸೇರಿದಂತೆ ಇನ್ನೂ ಹಲವರು ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.
ವಕೀಲ ವಿನೀತ್ ಸುಪ್ರೀಂ ಕೋರ್ಟ್ ಗೆ ಗಿಲಾನಿ, ಕನ್ಹಯ್ಯ ಕುಮಾರ್ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ. ನೆಹರು ವಿವಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಹೆಸರಿನಲ್ಲಿ ಕೆಲವು ವಿದ್ಯಾರ್ಥಿಗಳು ಉಗ್ರ ಅಫ್ಜಲ್ ಗುರು ನನ್ನು ಗಲ್ಲಿಗೇರಿಸಿದ್ದನ್ನು ವಿರೋಧಿಸಿ ಸುಪ್ರೀಕೋರ್ಟ್ ನ್ಯಾಯಾಧೀಶರನ್ನು ಕೊಲೆಗಾರರೆಂದು ಬಿಂಬಿಸಲು ಯತ್ನಿಸಿದ್ದಾರೆ ಎಂದು ವಕೀಲ ವಿನೀತ್ ಆರೋಪಿಸಿದ್ದಾರೆ.
फारुख हुसैन लखीमपुर खीरी: उत्तर प्रदेश के डिप्टी सीएम केशव प्रसाद मौर्य आज लखीमपुर खीरी…
माही अंसारी वाराणसी: वाराणसी के सारनाथ थाना अंतर्गत पहाड़िया स्थित एक बहुमंजिला भवन में चल…
ए0 जावेद वाराणसी: राजातालाब थानाध्यक्ष अजीत कुमार वर्मा की शनिवार शाम एक सड़क हादसे के…
तारिक आज़मी वाराणसी: संभल आज साम्प्रदायिकता की आग में जल उठा। सदियों पुरानी सम्भल की…
शहनवाज अहमद गाजीपुर: गहमर थाना क्षेत्र के वारा गांव के पास गंगा नदी में आज…
आदिल अहमद डेस्क: बाबा सिद्दीक़ी के बेटे ज़ीशान सिद्दीक़ी मुंबई की बांद्रा पूर्व सीट से…